Bible Study: FrontPage




 

1 John, Chapter 3

Bible Study - 1 John 3 - Kannada - Kannada Bible - Web
 
 
 
Comment!       Comment Disqus!
  
1. ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
  
2. ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
  
3. ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
  
4. ಪಾಪಮಾಡುವವನು ನ್ಯಾಯಪ್ರಮಾಣವನ್ನು ವಿಾರುವವನಾಗಿದ್ದಾನೆ; ಯಾಕಂದರೆ ನ್ಯಾಯ ಪ್ರಮಾಣವನ್ನು ವಿಾರುವದೇ ಪಾಪ.
  
5. ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
  
6. ಆತನಲ್ಲಿ ನೆಲೆಗೊಂಡಿರುವವನು ಪಾಪಮಾಡನು; ಪಾಪಮಾಡುವವನು ಆತನನ್ನು ಕಂಡವನೂ ಅಲ್ಲ, ತಿಳಿದವನೂ ಅಲ್ಲ.
  
7. ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
  
8. ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
  
9. ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
  
10. ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
  
11. ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.
  
12. ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
  
13. ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
  
14. ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
  
15. ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.
  
16. ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
  
17. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
  
18. ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
  
19. ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
  
20. ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
  
21. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
  
22. ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
  
23. ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.
  
24. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.


Search in:
Terms:

Vote and Comment on Facebook:Recommend This Page:
Post on Facebook Add to your del.icio.us Digg this story StumbleUpon Twitter Google Plus Post on Tumblr Add to Reddit Pin this story Linkedin Google Bookmark Blogger
Insert Your Personal Insight:

Please do not make mean comments and follow the biblical and spiritual character of this forum. If, however unpleasant situations arise, we request to flag it to us in order to evaluate the situation.

Text source: This text is in the public domain.

This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com


SELECT VERSION

COMPARE WITH OTHER BIBLES