18. ಇದಲ್ಲದೆ ಯೆಹೋ ಯಾದನು ಕರ್ತನ ಆಲಯದ ಪರಿಚಾರಕರನ್ನು ನೇಮಿ ಸಿದನು. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿ ರುವ ಹಾಗೆ ಸಂತೋಷದಿಂದಲೂ ಸಂಗೀತದಿಂದಲೂ ದಾವೀದನಿಂದ ನೇಮಿಸಲ್ಪಟ್ಟ ಹಾಗೆ ದಾವೀದನು ಕರ್ತನ ದಹನಬಲಿಗಳನ್ನು ಅರ್ಪಿಸುವದಕ್ಕೆ ಕರ್ತನ ಆಲಯ ದಲ್ಲಿ ವಿಭಾಗಿಸಿದ ಲೇವಿಯರಾದ ಯಾಜಕರಿಂದ ಅವರನ್ನು ನೇಮಿಸಿದನು.