3. ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.