Home / Kannada / Kannada Bible / Web / Job

 

Job, Chapter 25

  
1. ಆ ಮೇಲೆ ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೇಳಿದ್ದೇನಂದರೆ --
  
2. ದೊರೆ ತನವೂ ಹೆದರಿಕೆಯೂ ಆತನೊಂದಿಗೆ ಇವೆ; ತನ್ನ ಉನ್ನತ ಸ್ಥಳಗಳಲ್ಲಿ ಆತನು ಸಮಾಧಾನ ಮಾಡುತ್ತಾನೆ.
  
3. ಆತನ ಸೈನ್ಯಗಳಿಗೆ ಲೆಕ್ಕ ಉಂಟೋ? ಆತನ ಬೆಳಕು ಯಾರ ಮೇಲೆ ಮೂಡುವದಿಲ್ಲ?
  
4. ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?
  
5. ಇಗೋ, ಚಂದ್ರನಾದರೂ ಹೊಳೆಯು ವದಿಲ್ಲ. ನಕ್ಷತ್ರಗಳಾದರೂ ಆತನ ದೃಷ್ಟಿಗೆ ನಿರ್ಮಲವಾ ಗಿರುವದಿಲ್ಲ.
  
6. ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?