4. ಇವರು ಯಾಜಕನಾದ ಎಲ್ಲಾಜಾರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆನಮ್ಮ ಸಹೋದರರಲ್ಲಿ ನಮಗೆ ಬಾಧ್ಯತೆಯನ್ನು ಕೊಡು ವಂತೆ ಕರ್ತನು ಮೋಶೆಗೆ ಆಜ್ಞಾಪಿಸಿದನು ಅಂದರು. ಆದದರಿಂದ ಅವರ ತಂದೆಗಳ ಸಹೋದರರ ಮಧ್ಯ ದಲ್ಲಿ ಅವರಿಗೆ ಕರ್ತನ ವಾಕ್ಯದ ಹಾಗೆಯೇ ಬಾಧ್ಯತೆ ಯನ್ನು ಕೊಟ್ಟನು.