15. ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.