Home / Kannada / Kannada Bible / Web / Psalms

 

Psalms, Chapter 112

  
1. ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
  
2. ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.
  
3. ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.
  
4. ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.
  
5. ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
  
6. ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.
  
7. ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ.
  
8. ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.
  
9. ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.
  
10. ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.