Home / Kannada / Kannada Bible / Web / Psalms

 

Psalms, Chapter 114

  
1. ಇಸ್ರಾಯೇಲನು ಐಗುಪ್ತದೊಳಗಿಂದಲೂ ಯಾಕೋಬನ ಮನೆ ತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟಾಗ
  
2. ಯೆಹೂದನು ಆತನ ಪರಿಶುದ್ಧ ಸ್ಥಳವೂ ಇಸ್ರಾಯೇಲನು ಆತನ ದೊರೆತನವೂ ಆಗಿದ್ದರು.
  
3. ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್‌ ಹಿಂತಿರುಗಿತು.
  
4. ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು.
  
5. ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?
  
6. ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ?
  
7. ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವ
  
8. ಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.