Home / Kannada / Kannada Bible / Web / Psalms

 

Psalms, Chapter 122

  
1. ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.
  
2. ಓ ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಲುಗಳಲ್ಲಿ ನಿಲ್ಲುತ್ತವೆ.
  
3. ಯೆರೂಸಲೇಮು ಒಟ್ಟಾಗಿ ಜೋಡಿಸಲ್ಪಟ್ಟ ಪಟ್ಟ ಣದ ಹಾಗೆ ಕಟ್ಟಲ್ಪಟ್ಟಿದೆ.
  
4. ಅಲ್ಲಿಗೆ ಗೋತ್ರಗಳು, ಕರ್ತನ ಗೋತ್ರಗಳು, ಇಸ್ರಾಯೇಲಿಗೆ ಸಾಕ್ಷಿಯಾಗಿ, ಕರ್ತನ ಹೆಸರನ್ನು ಕೊಂಡಾಡುವದಕ್ಕೆ ಹೋಗುತ್ತದೆ.
  
5. ಅಲ್ಲಿ ನ್ಯಾಯತೀರ್ವಿಕೆಗೆ ಸಿಂಹಾಸನಗಳೂ ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.
  
6. ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.
  
7. ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.
  
8. ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ ನಿನ್ನಲ್ಲಿ ಸಮಾಧಾನವಿರಲೆಂದು ಈಗ ಹೇಳುತ್ತೇನೆ.
  
9. ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.