Home / Kannada / Kannada Bible / Web / Psalms

 

Psalms, Chapter 128

  
1. ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
  
2. ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.
  
3. ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
  
4. ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು.
  
5. ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.
  
6. ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.