Home / Kannada / Kannada Bible / Web / Psalms

 

Psalms, Chapter 130

  
1. ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ.
  
2. ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
  
3. ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
  
4. ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
  
5. ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ.
  
6. ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
  
7. ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.
  
8. ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.