Home / Kannada / Kannada Bible / Web / Psalms

 

Psalms, Chapter 54

  
1. ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು.
  
2. ಓ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಬಾಯಿಯ ಮಾತುಗಳಿಗೆ ಕಿವಿಗೊಡು.
  
3. ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ.
  
4. ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ.
  
5. ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
  
6. ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.
  
7. ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.