Home / Kannada / Kannada Bible / Web / Psalms

 

Psalms, Chapter 60

  
1. ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
  
2. ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿದ್ದೀ; ಅದರ ಬಿರುಕುಗಳನ್ನು ಸರಿಮಾಡು; ಅದು ಕದಲು ತ್ತದೆ.
  
3. ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.
  
4. ಸತ್ಯದ ನಿಮಿತ್ತ ಧ್ವಜವು ಎತ್ತಲ್ಪಡುವಂತೆ ನಿನಗೆ ಭಯಪಡುವವರಿಗೆ ನೀನು ಅದನ್ನು ಕೊಟ್ಟಿದ್ದೀ. ಸೆಲಾ.
  
5. ನಿನ್ನ ಪ್ರಿಯರು ಬಿಡುಗಡೆ ಯಾಗುವಂತೆ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನ ಬಲಗೈಯಿಂದ ರಕ್ಷಿಸು.
  
6. ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು.
  
7. ಗಿಲ್ಯಾದ್‌ ಮನಸ್ಸೆ ನನ್ನದು; ಎಫ್ರಾಯಾಮ್‌ ನನ್ನ ತಲೆಯ ಬಲವಾಗಿದೆ; ಯೆಹೂದನು ನನಗೆ ನ್ಯಾಯ ಕೊಡುವವನು;
  
8. ಮೋವಾಬ್‌ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು.
  
9. ಬಲವುಳ್ಳ ಪಟ್ಟಣಕ್ಕೆ ನನ್ನನ್ನು ಕರತರುವವನಾರು? ಎದೋಮಿನೊಳಗೆ ನನ್ನನ್ನು ನಡಿಸುವವನಾರು?
  
10. ಓ ದೇವರೇ, ನಮ್ಮನ್ನು ತಳ್ಳಿಬಿಟ್ಟು ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನ ಲ್ಲವೋ?
  
11. ಇಕ್ಕಟ್ಟಿನಲ್ಲಿ ನಮಗೆ ಸಹಾಯ ಮಾಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.
  
12. ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.